×
Ad

10,611 ಶಾಲಾ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Update: 2019-03-07 23:46 IST

ಬೆಂಗಳೂರು, ಮಾ. 7: 2018-19ನೆ ಸಾಲಿನಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳು ಸೇರಿದಂತೆ 34 ಶೈಕ್ಷಣಿಕ ಜಿಲ್ಲೆಗಳ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 10,611 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಮಾ.11ರಿಂದ ಎಪ್ರಿಲ್ 10ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪದವೀಧರ ಪ್ರಾಥಮಿಕ ಶಿಕ್ಷಣ(6ರಿಂದ 8ನೆ ತರಗತಿ) ವೃಂದದ 10,611 ಖಾಲಿ ಹುದ್ದೆಗಳಿಗೆ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಸ್ಪಧಾತ್ಮಕ ಪರೀಕ್ಷೆ ದಿನಾಂಕ: ಹೈದರಾಬಾದ್ ಕರ್ನಾಟಕ ಪ್ರದೇಶದ ಜಿಲ್ಲೆಗಳ ಶೇ.80ರ ಸ್ಥಳೀಯ ವೃಂದದ ಮತ್ತು ಬೆಂಗಳೂರು ಬಿಬಿಎಂಪಿ ಪ್ರದೇಶದ ವ್ಯಾಪ್ತಿಯ ಶಾಲೆಗಳ ಶೇ.8ರ ರಾಜ್ಯ ಮಟ್ಟದ ಸ್ಥಳೀಯ ವೃಂದದ ಹುದ್ದೆಗಳಿಗೆ ಮೇ 18 ಮತ್ತು 19ರಂದು ಪರೀಕ್ಷೆ ನಡೆಸಲಿದೆ.

ಹೈದರಾಬಾದ್ ಕರ್ನಾಟಕ ಪ್ರದೇಶದ ಜಿಲ್ಲೆಗಳ ಶೇ.20, ಬೆಂಗಳೂರು ಬಿಬಿಎಂಪಿ ಪ್ರದೇಶದ ವ್ಯಾಪ್ತಿಯ ಶಾಲೆಗಳ ಶೇ.92ರ ಮಿಕ್ಕುಳಿದ ವೃಂದದ ಮತ್ತು ಇತರೆ ಜಿಲ್ಲೆಗಳ ಶೇ.100ರ ಹುದ್ದೆಗಳಿಗೆ ಮೇ 25 ಮತ್ತು 26ಂದು ಪರೀಕ್ಷೆ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ನೇಮಕಾತಿ ಅಧಿಸೂಚನೆಗಳನ್ನು ಇಲಾಖೆ ವೆಬ್‌ಸೈಟ್ http://schooleducation.kar.nic.in ನಲ್ಲಿ ನೋಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ.ಜಾಫರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News