ಉದ್ಯಮಿ ಮನೆ ಮೇಲೆ ಐಟಿ ದಾಳಿ
Update: 2019-03-08 19:33 IST
ಬೆಂಗಳೂರು, ಮಾ.8: ರಿಯಲ್ ಎಸ್ಟೇಟ್ ಉದ್ಯಮಿ ಕೆ.ಜಿ.ಕೃಷ್ಣ ಅವರ ಮನೆ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಹೈಗ್ರೌಂಡ್ ಬಳಿಯ ಪ್ರೆಸ್ಟಿಜ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿರುವ ಕೆ.ಜಿ.ಕೃಷ್ಣ ನಿವಾಸದ ಮೇಲೆ ಶುಕ್ರವಾರ ಬೆಳಗಿನ ಜಾವ ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ಮಾಡಿ, ಮನೆಯಲ್ಲಿದ್ದ ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಕೆ.ಜಿ.ಷ್ಣ, ಆಸ್ತಿ ತೆರಿಗೆ ವಂಚಿಸಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದೇವನಹಳ್ಳಿ, ತುಮಕೂರು, ಕೃಷ್ಣರಾಜಪುರ, ಮೈಸೂರು ಸೇರಿದಂತೆ ಹಲವೆಡೆ ಜಮೀನು ಹೊಂದಿದ್ದ. ದಾಳಿ ವೇಳೆ 3 ನೂರು ಎಕರೆ ಆಸ್ತಿ ದಾಖಲೆ, 8 ಕೆ.ಜಿ ಚಿನ್ನಾಭರಣ, ನಗದು ಹಣ ಸೇರಿದಂತೆ ಇನ್ನಿತರ ಆಸ್ತಿ ಪತ್ರಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.