×
Ad

ಉಡುಪಿ: ಹಿರಿಯ ನಾಗರಿಕರಿಗೆ ಸಹಾಯವಾಣಿ

Update: 2019-03-08 21:22 IST

ಉಡುಪಿ, ಮಾ.8: ಜಿಲ್ಲೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು ತಮ್ಮ ಕುಟುಂಬದ ಸದಸ್ಯರಿಂದ ಅಥವಾ ಸರಕಾರಿ, ಖಾಸಗಿ, ಸಾರ್ವಜನಿಕ ಸಂಘ ಸಂಸ್ಥೆಗಳಿಂದ ಅಥವಾ ವ್ಯಕ್ತಿಗಳಿಂದ ಏನಾದರೂ ಮೋಸ, ವಂಚನೆ, ದೌರ್ಜನ್ಯ, ಕಿರುಕುಳಗಳನ್ನು ಎದುರಿಸುತ್ತಿದ್ದರೆ, ಏನಾದರೂ ದೂರುಗಳಿದ್ದಲ್ಲಿ ಅಥವಾ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಿರಿಯರ ಕಲ್ಯಾಣಕ್ಕಾಗಿ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ಬೇಕಾಗಿದ್ದಲ್ಲಿ ಬನ್ನಂಜೆಯಲ್ಲಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿರುವ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:(1090 ಟೋಲ್‌ಪ್ರೀ) 0820-2526394ನ್ನು ಸಂಪರ್ಕಿಸುವಂತೆ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News