×
Ad

ರೆಡ್‌ಕ್ರಾಸ್ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Update: 2019-03-08 21:25 IST

ಉಡುಪಿ, ಮಾ.8: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಶುಕ್ರವಾರ ಅಜ್ಜರಕಾಡಿನಲ್ಲಿರುವ ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಯಮಿ ಸುಪ್ರಿಯಾ ಆರ್. ಕಾಮತ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗಲು ಸ್ವಯಂ ಇಚ್ಛಾಶಕ್ತಿಯನ್ನು ಹೊಂದಿರಬೇಕು. ಧೈರ್ಯಗುಂದದೇ ಮುನ್ನಡೆಯಬೇಕು. ಆಂತರಿಕ ಸ್ಪೂರ್ತಿ ಯಿಂದ ಏನಾದರೂ ಸಾಧಿಸಬೇಕೆನ್ನುವ ಗುರಿ ಅತ್ಯಗತ್ಯ. ಸಮಾನತೆ ನೆಲೆಯಲ್ಲಿ ಮಹಿಳೆಯರಿಗೂ ಅವಕಾಶಗಳು ಸಿಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಲ್ಪಟ್ಟ ಪ್ರವೀಣಾ ಮೋಹನ್, ಮಾಲತಿ ಬಿ. ಮೆಂಡನ್, ಗೀತಾ ಕುಮಾರಿ ಮತ್ತು ಸುಮಿತ್ರ ಕೊೀತ್ವಾಲ್‌ರನ್ನು ಸನ್ಮಾನಿಸಲಾ ಯಿತು.

ಅಧ್ಯಕ್ಷತೆಯನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಬಾಪತಿ ಡಾ.ಉಮೇಶ್ ಪ್ರಭು ವಹಿಸಿದ್ದರು. ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ. ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ರೆಡ್‌ಕ್ರಾಸ್‌ನ ಉಡುಪಿ ಜಿಲ್ಲಾ ಶಾಖೆಯ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ. ಸ್ವಾಗತಿಸಿ, ಖಜಾಂಚಿ ಟಿ. ಚಂದ್ರಶೇಖರ್ ವಂದಿಸಿದರು. ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಜಯರಾಮ ಆಚಾರ್ಯ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News