ಕಾಶ್ಮೀರಿಗಳ ವಿರುದ್ಧ ಹಿಂಸಾಚಾರ ಖಂಡನೀಯ: ರಾಹುಲ್ ಗಾಂಧಿ
ಹೊಸದಿಲ್ಲಿ,ಮಾ.8: ದೇಶಾದ್ಯಂತ ಕಾಶ್ಮೀರಿಗಳ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತ ಪ್ರತಿ ಮೂಲೆಯಿಂದಲೂ ಅದರ ಪ್ರಜೆಗಳಿಗೆ ಸೇರಿದ್ದು ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ಒಣಹಣ್ಣು ಮಾರುತ್ತಿದ್ದ ಕಾಶ್ಮೀರಿ ವ್ಯಾಪಾರಿಗಳ ಮೇಲೆ ಸಂಘಪರಿವಾರದ ಸದಸ್ಯರು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಶ್ಮೀರಿಗಳ ಮೇಲೆ ಹಲ್ಲೆ ನಡೆಸಿರುವ ಈ ವಿಡಿಯೊವನ್ನು ಕಂಡು ನನಗೆ ಆಘಾತವಾಗಿದ್ದು ಅದೇ ವೇಳೆ ದಾಳಿಕೋರರ ವಿರುದ್ಧ ನಿಂತ ಧೈರ್ಯಶಾಲಿಗಳನ್ನು ಅಭಿನಂದಿಸುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ಟ್ವೀಟ್ ಮಾಡಿದ್ದಾರೆ.
ಫೆಬ್ರವರಿ 14ರಂದು ಕಾಶ್ಮೀರದ ಪುಲ್ವಾಮದಲ್ಲಿ ಆತ್ಮಾಹುತಿ ದಾಳಿಯಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಸಾವನ್ನಪ್ಪಿದ ಘಟನೆಯ ನಂತರ ದೇಶಾದ್ಯಂತ ಕಾಶ್ಮೀರಿಗಳ ಮೇಲೆ ಹಲ್ಲೆ ನಡೆದ ಘಟನೆಗಳು ವರದಿಯಾಗುತ್ತವೆ. ಉತ್ತರ ಪ್ರದೇಶದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.