ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಿದ ಸಿಬಿಎಸ್‌ಇ

Update: 2019-03-08 16:57 GMT

ಹೊಸದಿಲ್ಲಿ, ಮಾ.8: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡುವವರ ವಿರುದ್ಧ ದಿಲ್ಲಿ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್ ದಾಖಲಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವುದಾಗಿ ಸಿಬಿಎಸ್‌ಇ ತಿಳಿಸಿದೆ.

ಫೆ.15ರಿಂದ ‘ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್’(ಸಿಬಿಎಸ್‌ಇ) ಪರೀಕ್ಷೆ ಆರಂಭವಾಗಿದ್ದು, 167 ವಿಷಯಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯುತ್ತಿದೆ. ಆದರೆ ಕೆಲವು ಪ್ರಶ್ನೆ ಪತ್ರಿಕೆಗಳ ಸೋರಿಕೆಯಾಗಿದೆ ಎಂಬ ಸುಳ್ಳು ಸುದ್ದಿ ಯೂಟ್ಯೂಬ್‌ನಲ್ಲಿ ಹರಿದಾಡುತ್ತಿದೆ. ಇದನ್ನು ನಿರ್ಲಕ್ಷಿಸಿ ಪರೀಕ್ಷೆ ಬರೆಯುವತ್ತ ಗಮನ ಹರಿಸುವಂತೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಲಹೆ ನೀಡಿದೆ.

ಅಲ್ಲದೆ ಆಗಿಂದಾಗ್ಗೆ ದಿನಪತ್ರಿಕೆಗಳಲ್ಲಿ ಸೂಚನೆ ಹಾಗೂ ಸಾರ್ವಜನಿಕ ಪ್ರಕಟಣೆ ಮೂಲಕ ಸಿಬಿಎಸ್‌ಇ ನೀಡುವ ಹೇಳಿಕೆಗಳನ್ನು ಗಮನಿಸಬೇಕೆಂದು ಮನವಿ ಮಾಡಿಕೊಂಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News