ಕುಂದಾಪುರ ರಸ್ತೆ ಬದಿ ಹರಿದ ರಾಷ್ಟ್ರಧ್ವಜಗಳು ಪತ್ತೆ: ಪ್ರಕರಣ ದಾಖಲು
Update: 2019-03-08 23:02 IST
ಕುಂದಾಪುರ, ಮಾ. 8: ಕುಂದಾಪುರದ ಮುಖ್ಯ ರಸ್ತೆಯಲ್ಲಿರುವ ಕುಂದೇಶ್ವರ ದೇವಸ್ಥಾನದ ಎದುರುಗಡೆಯ ಸ್ಥಳದಲ್ಲಿ ರಾಷ್ಟ್ರಧ್ವಜಗಳು ಹರಿದು ಚಿಂದಿ ಮಾಡಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಾರ್ಮಿಕರಾದ ಬಶೀರ್ ಹಾಗೂ ಮನೀಷ್ ಪಾಂಡೆ ಎಂಬವರು ನಡೆದುಕೊಂಡು ಹೋಗುತ್ತಿದ್ದ ವೇಳೆ ರಸ್ತೆ ಬದಿಯ ಮೈದಾನದಲ್ಲಿ ರಾಶಿಯಾಗಿ ಬಿದ್ದಿರುವ ರಾಷ್ಟ್ರಧ್ವಜವನ್ನು ಗಮನಿಸಿ ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿಯವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪುರಸಭೆ ಸಿಬ್ಬಂದಿ ಇವುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇದೊಂದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ.
ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.