×
Ad

ರಾಯಚೂರು ವಿವಿ ಸ್ಥಾಪನೆಗೆ ಮಾಜಿ ಪ್ರಧಾನಿ ದೇವೇಗೌಡ ಶಿಫಾರಸ್ಸು

Update: 2019-03-09 18:45 IST

ಬೆಂಗಳೂರು, ಮಾ.9: ರಾಯಚೂರು ವಿಶ್ವವಿದ್ಯಾಲಯವನ್ನು ಶೀಘ್ರವೇ ಸ್ಥಾಪನೆ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶಿಫಾರಸ್ಸು ಮಾಡಿದ್ದಾರೆ.

ಎಸ್.ಐ.ಓ ರಾಜ್ಯಾಧ್ಯಕ್ಷ ನಿಹಾಲ್ ಕಿದಿಯೂರು ನೇತೃತ್ವದ ನಿಯೋಗವು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಘೋಷಣೆಯಾಗುವ ಮುನ್ನ ರಾಯಚೂರು ವಿಶ್ವವಿದ್ಯಾಲಯ ಕಾರ್ಯನಿರ್ವಹಿಸುವಂತೆ ಸರಕಾರಕ್ಕೆ ಸೂಚಿಸುವಂತೆ ಮನವಿ ಮಾಡಿತು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿದ ದೇವೇಗೌಡರು, ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಈ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು. ಅಲ್ಲದೇ, ಎಸ್‌ಐಓ ನಿಯೋಗ ನೀಡಿದ ಮನವಿ ಪತ್ರವನ್ನು ಮುಖ್ಯಮಂತ್ರಿಯ ಕಚೇರಿಗೆ ರವಾನಿಸಿದರು ಎಂದು ಎಸ್‌ಐಓ ಮುಖಂಡ ಡಾ.ನಸೀಮ್ ಅಹ್ಮದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News