×
Ad

ಮಾ.10ರಂದು ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ

Update: 2019-03-09 21:54 IST

ಉಡುಪಿ, ಮಾ.9: ರಾಜ್ಯ ಸರಕಾರ ಉಡುಪಿ ಜಿಲ್ಲೆಯಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 2019-20ನೇ ಸಾಲಿನ ಆರನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ನಾಳೆ ಮಾ.10ರಂದು ಬೆಳಗ್ಗೆ 11 ರಿಂದ ಅಪರಾಹ್ನ 1 ಗಂಟೆಯವರೆಗೆ ನಡೆಯಲಿದೆ.

ಉಡುಪಿ ಜಿಲ್ಲೆಯಲ್ಲಿ ಮೂರು ಪರೀಕ್ಷಾ ಕೇಂದ್ರಗಳಿದ್ದು,- ಸುಂದರ ಪುರಾಣಿಕ್ ಸರಕಾರಿ ಪ್ರೌಢ ಶಾಲೆ ಪೆರ್ವಾಜೆ ಕಾರ್ಕಳ ತಾಲೂಕು, ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ, ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ (ಬೋರ್ಡ್ ಹೈಸ್ಕೂಲ್)- ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿ ಕಾಪಾಡುವ ಸಲುವಾಗಿ ಮೂರೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ವ್ಯಾಪ್ತಿ ಪ್ರದೇಶವನ್ನು ನಿಷೇಧಿತ ವಲಯವೆಂದು ಘೋಷಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪತಿ ಅವರು ಸೆಕ್ಷನ್ 144(1)ರಂತೆ ನಿಷೇಧಾಜ್ಞೆಯನ್ನು ಘೋಷಿಸಿದ್ದಾರೆ.

ನಿಷೇಧಾಜ್ಞೆ ಆದೇಶ ಬೆಳಗ್ಗೆ 9ರಿಂದ ಅಪರಾಹ್ನ 3 ರವರೆಗೆ ಜಾರಿಯಲ್ಲಿ ರುತ್ತದೆ. ಪರೀಕ್ಷಾ ಕೇಂದ್ರದ ಸುತ್ತ ಇರುವ ಝೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News