×
Ad

ಸಾಲಿಹಾತ್ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Update: 2019-03-09 22:05 IST

ಉಡುಪಿ, ಮಾ.9: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಮಾ.8ರಂದು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಹೂಡೆಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೀಮ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಪುರುಷರು ನಿಭಾಯಿಸುವ ಕಾರ್ಯ ಭಾರವನ್ನು ಮಹಿಳೆ ನಿಭಾಯಿಸಲು ಸಮರ್ಥಳಾಗಿದ್ದಾಳೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನ ಸಾಮರ್ಥ್ಯವನ್ನು ತೋರಿಸಿ ಸಾಧನೆಯಲ್ಲಿ ಮೇಲುಗೈ ಸಾಧಿಸುತ್ತಿದ್ದಾಳೆ ಎಂದು ತಿಳಿಸಿದರು.

ಕೆಮ್ಮಣ್ಣು ಗ್ರಾಪಂ ಅಧ್ಯಕ್ಷೆ ಫೌಝಿಯಾ ಸಾಧಿಕ್ ಮಾತನಾಡಿ, ಈ ಹಿಂದೆ ಕೇವಲ ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆ, ಈಗ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿ ಅದರಲ್ಲಿ ಯಶಸ್ಸು ಕಂಡಿರುವುದು ಉತ್ತಮ ಸಮಾಜದ ಸಂಕೇತವಾಗಿದೆ. ಮಹಿಳೆ ಪ್ರಾಮಾಣಿಕವಾಗಿ ತನ್ನ ಕರ್ತವ್ಯ ನಿರ್ವಹಿಸುವವಳಾಗಿ ದ್ದಾಳೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಸಬೀನಾ ವಹಿಸಿದ್ದರು. ಅರೇಬಿಕ್ ಕಾಲೇಜಿನ ಪ್ರಾಂಶುಪಾಲೆ ಕುಲ್ಸುಮ್ ಅಬೂಬಕರ್, ವಿದ್ಯಾರ್ಥಿ ಪ್ರತಿನಿಧಿ ಶಾಝೀನ್ ಬೇಗಂ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶಾಹ್‌ಝೀನ್ ಸ್ವಾಗತಿಸಿ, ನೀಹಾ ಪರ್ವೀನ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಬಾನು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News