ಕಸಾಪ ಅಧ್ಯಕ್ಷ ಮನು ಬಳಿಗಾರ್ ರಾಜೀನಾಮೆ ನೀಡಲು ಒತ್ತಾಯ

Update: 2019-03-09 17:29 GMT

ಬೆಂಗಳೂರು, ಮಾ.9: ಅಧಿಕಾರ ದಾಹದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಿಕೊಂಡು ಇನ್ನೂ ಅಧ್ಯಕ್ಷರಾಗಿ ಮುಂದುವರೆದಿರುವ ಡಾ.ಮನು ಬಳಿಗಾರ ಕೂಡಲೇ ರಾಜೀನಾಮೆ ನೀಡಬೇಕೆಂದು ಕರ್ನಾಟಕ ರಾಜ್ಯ ಸಮಾನ ಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಮತ್ತು ಸಮಾಜ ಸ್ಪಂದನ ಸೇವಾ ಒಕ್ಕೂಟ ಒತ್ತಾಯಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಸಾಹಿತಿ ಮ.ಚಿ.ಕೃಷ್ಣಾ, ಕನ್ನಡ ಭಾಷೆಯ ಬೆಳವಣಿಗೆ, ಉಳಿವು ಚಿಂತನೆಗಾಗಿಯೇ ಆಡಳಿತಾತ್ಮಕ ತಜ್ಞರನ್ನು ಆಯ್ಕೆ ಮಾಡಿ ಪ್ರತಿ 3 ವರ್ಷಕ್ಕೊಮ್ಮೆ ಅಧಿಕಾರದ ವರ್ಗವನ್ನು ಆಯ್ಕೆ ಮಾಡಲಾಗುತ್ತಿತ್ತು. ಆದರೆ, ಮನುಬಳಿಗಾರ್ ಅಧಿಕಾರದ ಆಸೆಗಾಗಿ ಸರ್ವಸದಸ್ಯರ ಸಭೆ ಕರೆದು ಈ ಅವಧಿಯನ್ನು 5 ವರ್ಷಕ್ಕೆ ಮುಂದುವರೆಸಿಕೊಂಡು ಹೋಗುತ್ತಿರುವುದು ನಿಯಮ ಬಾಹಿರವಾಗಿದೆ. ಹೀಗಾಗಿ, ಮುಂದಿನ ಚುನಾವಣೆಗೆ ಅನುವು ಮಾಡಿಕೊಟ್ಟು, ಯುವ ಸಾಹಿತಿಗಳಿಗೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.

ಚಲನಚಿತ್ರ ನಿರ್ದೇಶಕ ಟಿಪ್ಪುವರ್ಧನ್ ಮಾತನಾಡಿ, ಇತ್ತೀಚಿಗೆ ಮನು ಬಳಿಗಾರ ಸಾಹಿತ್ಯದ ಬಗ್ಗೆ ಗಮನಹರಿಸುತ್ತಿಲ್ಲ. ಅವೈಜ್ಞಾನಿಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಸಾಹಿತಿಗಳಿಗೆ ಮಾಡುವ ಅವಮಾನ ಎಂದು ಕಿಡಿ ಕಾರಿದರು. ಪ್ರಸ್ತಕ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಾಗಿರುವ ಚುನಾವಣೆಗೆ ಸ್ಪರ್ಧಿಸಲು ಅನೇಕ ಸಾಹಿತಿಗಳು ಕಾತರರಾಗಿದ್ದಾರೆ. ಅವರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯತ್ವ ಪಡೆಯಲು 260 ರೂ. ಶುಲ್ಕವಿತ್ತು. ಈಗ 500 ರೂ. ಹೆಚ್ಚುವರಿ ಮಾಡಿದ್ದಾರೆ. ಅದರಿಂದ ಆರ್ಥಿಕವಾಗಿ ಹಿಂದುಳಿದ ಮಂದಿಗೆ ಸದಸ್ಯರಾಗಲು ಸಾಧ್ಯವಿಲ್ಲ. ಹೀಗಾಗಿ, ಶುಲ್ಕವನ್ನು 100 ರೂ. ಗೆ ಇಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ.

-ಮ.ಚಿ.ಕೃಷ್ಣಾ, ಹಿರಿಯ ಸಾಹಿತಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News