×
Ad

ಉಡುಪಿ: ಬೀಡಿನಗುಡ್ಡೆಯಲ್ಲಿ ವಲಸೆ ಕಾರ್ಮಿಕನ ಕೊಲೆ

Update: 2019-03-10 10:19 IST

ಉಡುಪಿ, ಮಾ.10:  ಬೀಡಿನಗುಡ್ಡೆ ಮೈದಾನ ಸಮೀಪ ವಲಸೆ ಕಾರ್ಮಿಕರೊಬ್ಬರನ್ನು ಕೊಲೆ ಮಾಡಿರುವ ಘಟನೆ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಕೊಲೆಗೀಡಾದ ಕಾರ್ಮಿಕನನ್ನು ಹರಿಹರದ ಸಂತೋಷ್ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿರುವ ಉಡುಪಿ ನಗರ ಠಾಣೆ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ಮಿಕರ ನಡುವೆ ಉಂಟಾದ ಜಗಳದಿಂದ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News