ಹುಬ್ಬಳ್ಳಿ: ಲಾರಿ ಢಿಕ್ಕಿ; ಪೊಲೀಸ್ ಪೇದೆ ಸ್ಥಳದಲ್ಲೇ ಮೃತ್ಯು

Update: 2019-03-10 07:18 GMT

ಹುಬ್ಬಳ್ಳಿ, ಮಾ. 10: ಲಾರಿ ಢಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ರಸ್ತೆಯ ಕುಸುಗಲ್ ಕ್ರಾಸ್ ಬಳಿ ರವಿವಾರ  ಬೆಳಗ್ಗೆ ನಡೆದಿದೆ‌.

ಗುರುಸಿದ್ದಪ್ಪ ಬಿ ಶಿರೂರ (52) ಮೃತರು ಎಂದು ಗುರುತಿಸಲಾಗಿದೆ.

ಬಂಡಿವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಕರ್ತವ್ಯ ಮುಗಿಸಿ ಕುಸುಗಲ್ ಗ್ರಾಮಕ್ಕೆ ಹೋಗುತ್ತಿದ್ದಾಗ ಲಾರಿ ಢಿಕ್ಕಿ ಹೊಡೆದಿದೆ. ಅವರ ತಲೆಗೆ ಗಂಭೀರ ಗಾಯವಾದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News