×
Ad

ಸ್ಪರ್ಶ ಕುಷ್ಠ ಅರಿವು ಕಾರ್ಯಕ್ರಮ

Update: 2019-03-10 15:38 IST

ಉಡುಪಿ, ಮಾ.10: ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಆರ್‌ಎಸ್‌ಬಿ ಸಂಘ ಹಿರಿಯಡ್ಕ ಇವರ ಸಹಬಾಗಿತ್ವದಲ್ಲಿ ಹಿರಿಯಡ್ಕ ಕೊಡಿಬೆಟ್ಟು ಜಿ.ಎಸ್.ಬಿ. ಸಬಾವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳು ಹಾಗೂ ಸ್ಪರ್ಶ ಕು್ಟ ಅರಿವು ಕಾರ್ಯಕ್ರಮ ನಡೆಯಿತು.

ಉಡುಪಿ ತಾಪಂ ಸದಸ್ಯ ಲಕ್ಷ್ಮೀನಾರಾಯಣ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು. ಕೊಡಿಬೆಟ್ಟು ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುಷ್ಟ ರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಫಿಸಿಯೋಥೆರಪಿಸ್ಟ್ ಸುಕುಮಾರ್ ಕುಷ್ಟ ರೋಗದ ಬಗ್ಗೆ ಹಾಗೂ ಉಡುಪಿಯ ಹಿರಿಯ ಪುರುಷ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ತಾಪಂ ಸದಸ್ಯೆ ಸಂಧ್ಯಾ ಕಾಮತ್, ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷ ಹರೀಶ್ ಸಾಲಿಯಾನ್ ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿದರು.

ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸತ್ಯಶಂಕರ್ ಪ್ರಾಸ್ತಾವಿಕ ಮಾತನಾಡಿದರು. ಉಡುಪಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಂಜಿತ್ ಕುಮಾರ್ ನಿರೂಪಿಸಿ, ದೇವಪ್ಪ ಪಟಗಾರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News