×
Ad

ಎಸೆಸೆಲ್ಸಿ ಪ.ಜಾ.ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

Update: 2019-03-10 15:44 IST

ಉಡುಪಿ, ಮಾ.10: 2018-19ನೇ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತಿದೆ.

ಪ್ರಥಮ ಪ್ರಯತ್ನದಲ್ಲೇ ಶೇ.60ರಿಂದ ಶೇ.74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7000 ರೂ.ಗಳನ್ನು ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15,000ರೂ.ನ್ನು ಮಂಜೂರು ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿ www.sw.kar.nic.in ಹಾಗೂ ವಿವರಗಳಿಗೆ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News