ಅಲೆಮಾರಿ/ ಅರೆ ಅಲೆಮಾರಿ ಜನಾಂಗದರಿಗೆ ಮಾಹಿತಿ ಕಾರ್ಯಾಗಾರ
ಉಡುಪಿ, ಮಾ.10: ಬ್ರಹ್ಮಾವರದ ಹಂದಾಡಿ ಗ್ರಾಪಂ ಸಭಾಂಗಣದಲ್ಲಿ ಜಿಲ್ಲೆಯ ಅಲೆಮಾರಿ/ ಅರೆಅಲೆಮಾರಿ ಜನಾಂಗದವರಿಗೆ ಹಿಂದುಳಿದ ವರ್ಗ ಗಳ ಕಲ್ಯಾಣ ಇಲಾಖೆಯಿಂದ ಸಿಗುವ ಸೌಲ್ಯಗಳ ಬಗ್ಗೆ ಅರಿವು ಮೂಡಿಸುವ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗೊಲ್ಲ ಹಾಗೂ ಜೋಗಿ ಸಮಾಜ ಬಾಂಧವರು ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದು ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರಲು ಕರೆ ನೀಡಿದರು.
ಜಿಪಂ ಉಪ್ಯಾಕ್ಷೆಶೀಲಾಕೆ.ಶೆಟ್ಟಿಕಾರ್ಯಕ್ರಮಉದ್ಘಾಟಿಸಿಮಾತನಾಡಿ,ಗೊಲ್ಲಹಾಗೂಜೋಗಿಸಮಾಜಬಾಂವರು ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಪಡೆದು ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರಲು ಕರೆ ನೀಡಿದರು. ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಗೊಲ್ಲ ಸಮಾಜ ಸಂಘದ ಅಧ್ಯಕ್ಷ ಬಿ.ರಾಮಗೊಲ್ಲ ಮಾತನಾಡಿ, ಗೊಲ್ಲ ಸಮುದಾಯ ದ ಬಗ್ಗೆ ಮಾಹಿತಿ ನೀಡಿ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸಮುದಾಯಕ್ಕೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜೋಗಿ ಸಮಾಜದ ಅಧ್ಯಕ್ಷ ಸುರೇಶ್ ಕುಮಾರ್ ಜೋಗಿ, ಉಡುಪಿ ತಾಪಂ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಜೋಗಿ ಸಮಾಜ ವಿವಿದೋದ್ಧೇಶ ಸಂಘದ ಕಾರ್ಯದರ್ಶಿ ಹರಿಶ್ಚಂದ್ರ, ಜಿಲ್ಲಾ ಗೊಲ್ಲ ಸಮಾಜದ ಕಾರ್ಯದರ್ಶಿ ಪುಟ್ಟಣ್ಣ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬ್ರಹ್ಮಾವರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಕ್ ಪೂರ್ವ ಬಾಲಕಿಯರ ನಿಲಯದ ಮೇಲ್ವಿಚಾರಕಿ ಆಶಾ ದೇವಿ ನಾಯಕ್‌ರನ್ನು ಗೊಲ್ಲ ಸಮಾಜದ ವತಿಯಿಂದ ಸಮ್ಮಾನಿಸಲಾಯಿತು.
ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಗಿರಿಧರ ಗಾಣಿಗ ಸ್ವಾಗತಿಸಿ ಆಶಾದೇವಿ ನಾಯ್ಕಾ ವಂದಿಸಿದರು. ದರ್ಶಿನಿ ಕಾರ್ಯಕ್ರಮ ನಿರೂಪಿಸಿ ದರು.