ನಟಿಗೆ ಲೈಂಗಿಕ ಕಿರುಕುಳ ಆರೋಪ: ನಟನ ವಿರುದ್ಧ ದೂರು ದಾಖಲು

Update: 2019-03-10 13:04 GMT

ಬೆಂಗಳೂರು, ಮಾ.10: ಕನ್ನಡ ಚಿತ್ರರಂಗದ ನಟಿ ವಿಜಯಲಕ್ಷ್ಮೀ ಅವರಿಗೆ ಸಹಾಯ ಮಾಡುವ ನೆಪದಲ್ಲಿ ನಟರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಲ್ಲಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಟ ರವಿಪ್ರಕಾಶ್ ವಿರುದ್ಧ ವಿಜಯಲಕ್ಷ್ಮೀ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಏನಿದು ಆರೋಪ?: ಕೆಲ ದಿನಗಳಿಂದ ಆನಾರೋಗ್ಯ ಸಮಸ್ಯೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಹಣಕಾಸಿನ ನೆರವು ನೀಡಿ ಎಂದು ಮನವಿ ಮಾಡಿಕೊಂಡಿದ್ದೆ. ಇದನ್ನೇ ಬಂಡವಾಳ ಮಾಡಿಕೊಂಡ ನಟ ರವಿಪ್ರಕಾಶ್ ಫೆ.27ರಂದು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, 1 ಲಕ್ಷ ರೂ. ನಗದು ಸೇರಿದಂತೆ ಅವಶ್ಯವಿರುವ ಬಟ್ಟೆ, ಊಟ, ತಿಂಡಿ ಸೇರಿ ಇನ್ನಿತರೆ ವಸ್ತುಗಳನ್ನು ನೀಡಿದ್ದರು. ಇದಾದ ನಂತರ ಪ್ರತಿದಿನ ಆಸ್ಪತ್ರೆಯ ಐಸಿಯೂಗೆ ಬರೋದು, ಪದೇ ಪದೇ ಮೊಬೈಲ್ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ನಟಿ ವಿಜಯಲಕ್ಷ್ಮೀ ದೂರು ನೀಡಿದ್ದಾರೆ.

ಕಿರುಕುಳ ನೀಡಿಲ್ಲ

ನಾನು ಹೆಣ್ಣು ಮಕ್ಕಳಿಗೆ ಗೌರವ ಕೊಡುತ್ತೇವೆ. ನಾನು ಮನಸ್ಸಿನಿಂದ ಮಾನವೀಯತೆ ದೃಷ್ಟಿಯಿಂದ ಸಹಾಯ ಮಾಡಿದ್ದೇನೆ. ವಿಜಯಲಕ್ಷ್ಮೀ ಅವರಿಗೆ ಯಾವುದೇ ಕಿರುಕುಳ ನೀಡಲ್ಲ. ನನ್ನ ಬಳಿ ಸಾಕ್ಷಗಳಿವೆ.

-ರವಿಪ್ರಕಾಶ್, ನಟ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News