ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ಹೊಸದಿಲ್ಲಿಗೆ
Update: 2019-03-10 19:50 IST
ಬೆಂಗಳೂರು, ಮಾ. 10: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಡೆಯಲಿರುವ ಎಐಸಿಸಿ ಚುನಾವಣೆ ಪರಿಶೀಲನಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (ಮಾ.11) ಸೋಮವಾರ ಬೆಳಗ್ಗೆ 7ಗಂಟೆ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ದಿಲ್ಲಿಯಲ್ಲಿ ಎಐಸಿಸಿ ಸಭೆ ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ. ಸಭೆ ಬಳಿಕ ಸಿದ್ದರಾಮಯ್ಯ ಅವರು ಅಹಮದಾಬಾದ್‌ಗೆ ಪ್ರಯಾಣ ಬೆಳೆಸಲಿದ್ದು, ಮಾ.12ರ ಮಂಗಳವಾರ ಅಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಗೊತ್ತಾಗಿದೆ.