ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಎಲ್ಲೆಲ್ಲಿ, ಯಾವಾಗ ಮತದಾನ ?
Update: 2019-03-10 20:41 IST
ಬೆಂಗಳೂರು,ಮಾ.10: ಲೋಕಸಭಾ ಚುನಾವಣೆಯ ಮತದಾನದ ದಿನಾಂಕ ಪ್ರಕಟವಾಗಿದ್ದು, ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ಎ.18 ರಂದು ಮತದಾನ ನಡೆಯಲಿರುವ ಕ್ಷೇತ್ರಗಳು
ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಮಂಡ್ಯ, ಕೊಡಗು-ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ
ಎ.23 ರಂದು ಮತದಾನ ನಡೆಯಲಿರುವ ಕ್ಷೇತ್ರಗಳು
ಚಿಕ್ಕೋಡಿ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ರಾಯಚೂರು, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಹಾವೇರಿ, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ