ಶಿಕ್ಷಣದ ಜೊತೆಗೆ ಆಧ್ಯಾತ್ಮ ಜ್ಞಾನ ಕೂಡ ಅಗತ್ಯ: ಕಾಣಿಯೂರು ಶ್ರೀ

Update: 2019-03-10 16:00 GMT

ಶಿರ್ವ, ಮಾ.10: ವಿದ್ಯಾರ್ಥಿಗಳು ಇತರರ ಜೊತೆಗೆ ತಮ್ಮನ್ನು ಹೋಲಿಸಿ ಕೊಳ್ಳುವ ಬದಲು ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಬೇಕು. ಶಿಕ್ಷಣದ ಜೊತೆಗೆ ಆಧ್ಯಾತ್ಮ ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ಉಡುಪಿ ಕಾಣಿ ಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಬಂಟಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆವರಣ ದಲ್ಲಿ ಶನಿವಾರ ನಡೆದ ಒಂಬತ್ತನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್ಟ್ ಹಾಗೂ ಸಂಸ್ಥೆಯ ಅಧ್ಯಕ್ಷ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಾತನಾಡಿ, ಉತ್ತಮ ಪ್ರಯತ್ನದಿಂದ ಯಶಸ್ಸು ಪಡೆಯಬೇಕು. ಪಡೆದ ಯಶಸ್ಸನ್ನು ಉಳಿಸಿಕೊಳ್ಳಬೇಕು. ಯಶಸ್ಸಿನ ದಾರಿಯಲ್ಲಿ ಬರುವ ಅಡೆತಡೆಗಳನ್ನು ನಿವಾರಿಸಿಕೊಂಡು ಔನ್ನತ್ಯದ ಹಾದಿಯಲ್ಲಿ ಮುನ್ನಡೆಯಬೇಕೆಂದು ಹೇಳಿದರು.

ಮುಖ್ಯ ಅತಿಥಿಯಾಗಿ ಡಾ.ಬಿ.ಎಂ.ಹೆಗ್ಡೆ ಮಾತನಾಡಿ, ಶಿಕ್ಷಣವೆಂದರೆ ಹಣ ಗಳಿಸಲು ಬೇಕಾದ ಸಾಧನವಲ್ಲ. ಬದಲಿಗೆ ಉತ್ತಮ ಚಾರಿತ್ರ್ಯ ನಿರ್ಮಾಣವನ್ನು ಮಾಡುವ ಉಪಕರಣ ಎಂದು ತಿಳಿಸಿದರು.

ಬೆಂಗಳೂರಿನ ಯುಟಿಲಿಟಿ ಪವರ್ ಸೊಲ್ಯುಷನ್ಸ್‌ನ ಹಿರಿಯ ಪ್ರಬಂಧಕ ಡಾ.ಕಣ್ಣನ್ ಮಾತನಾಡಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಪಿ. ರಾಮದಾಸ್ ಅವರನ್ನು ಗೌರವಿಸಲಾಯಿತು. ಸೈಕಲಿಂಗ್‌ನಲ್ಲಿ ವಿಶೇಷ ಸಾಧನೆ ಮಾಡಿದ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ನಾರಾಯಣ್ ನಾಯಕ್ ಅವರನ್ನು ಅಭಿನಂದಿಸಲಾಯಿತು. ವಿವಿಧ ವಿದ್ಯಾರ್ಥಿ ವೇತನಗಳನ್ನು ವಿತರಿಸಲಾಯಿತು.

ಅಂತಿಮ ವರ್ಷದ ಉತ್ತಮ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ‘ಶ್ರೀಮಧ್ವ ವಾದಿರಾಜ ಪ್ರಶಸ್ತಿಗಳನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸುಮಂತ್ ಮತ್ತು ಗಣಕಯಂತ್ರ ವಿಭಾಗದ ಸಮನ್ವಿತ ಭಾಗವತ್ ಇವರಿಗೆ ಪ್ರದಾನ ಮಾಡ ಲಾಯಿತು. ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್ಟ್‌ನ ಉಪಾಧ್ಯಕ್ಷ ಪಿ. ಶ್ರೀನಿವಾಸ ತಂತ್ರಿ, ಸದಸ್ಯರಾದ ಎಚ್.ವಿ.ಗೌತಮ, ್ಯಾಮ್ ಸುಂದರ್ ಉಪಸ್ಥಿತರಿದ್ದರು.

ಟ್ರಸ್ಟ್ ಕಾರ್ಯದರ್ಶಿ ರತ್ನಕುಮಾರ್ ಸ್ವಾಗತಿಸಿದರು. ಪ್ರಾಂಶುಪಾಲ ಪ್ರೊ. ಡಾ.ತಿರುಮಲೇಶ್ವರ ಭಟ್ ವಾರ್ಷಿಕ ವರದಿಯನ್ನು ವಾಚಿಸಿದರು. ಶರತ್ ಕುಮಾರ್ ವಂದಿಸಿದರು. ಪೂಜಾ ನಾಯರ್ ಮತ್ತು ಮಹೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News