ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಒಳ್ಳೆಯ ನಿರ್ಧಾರ: ಹರಿಪ್ರಸಾದ್
ಉಡುಪಿ, ಮಾ.10: ಮುಂದಿನ ತಿಂಗಳು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸಾಮಾಜಿಕ ಜಾಲ ತಾಣಗಳಿಗೆ ನಿರ್ಬಂಧ ವಿಧಿಸಿರುವ ಚುನಾವಣಾ ಆಯೋಗದ ನಿರ್ಧಾರ ಸ್ವಾಗತಾರ್ಹ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೇನೆಯ ವಿಚಾರವನ್ನು ಪ್ರಚಾರಕ್ಕೆ ಬಳಸದಂತೆ ನಿರ್ಬಂಧ ಹೇರಿರುವುದು ಸಹ ಅತ್ಯಂತ ಒಳ್ಳೆಯ ನಿರ್ಧಾರ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಚುನಾವಣೆ ಎರಡು ಹಂತದಲ್ಲಿ ನಡೆಯುವುದು ಒಳ್ಳೆಯ ನಿರ್ಧಾರ. ಆಯೋಗ ಎಲ್ಲವನ್ನು ಗಮನದಲ್ಲಿಟಟುಕೊಂಡೇ ಈ ನಿರ್ಧಾರ ಕೈಗೊಂಡಿದೆ ಎಂದವರು ಹೇಳಿದರು.
ದಿನೇಶ್ ಗುಂಡೂರಾವ್: ಈ ಹಿಂದೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿತ್ತು. ಈ ಬಾರಿ ಏಕೆ ಎರಡು ಹಂತದಲ್ಲಿ ನಡೆಯುತ್ತಿದೆ ಎಂಬುದು ಗೊತ್ತಿಲ್ಲ. ಒಂದೇ ಹಂತದಲ್ಲಿ ಚುನಾವಣೆ ನಡೆದ್ರೆ ಒಳ್ಳೆದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ನಾಳೆ ನಾವು ಹೊಸದಿಲ್ಲಿಗೆ ಹೋಗುತ್ತೇವೆ. ನಾಳೆಯ ಸಭೆಯಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಯಲಿದೆ ಎಂದೂ ಅವರು ಹೇಳಿದರು.