ಒಂದೇ ದಿನ 39,792 ಸಿವಿಲ್, ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು ಇತ್ಯರ್ಥ
ಬೆಂಗಳೂರು, ಮಾ.10: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ಒಂದೇ ದಿನ ಬರೋಬ್ಬರಿ 39,792 ಸಿವಿಲ್ ಹಾಗೂ ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು ಹಾಗೂ ಇನ್ನಿತರೆ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿವೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಹಂಚಾಟೆ ಸಂಜೀವಕುಮಾರ ತಿಳಿಸಿದ್ದಾರೆ.
ಸರ್ವರಿಗೂ ನ್ಯಾಯ ಎಂಬ ಪರಿಕಲ್ಪನೆ ಅಡಿಯಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಶೀಘ್ರವಾಗಿ ಹಾಗೂ ತ್ವರಿತವಾಗಿ ಪ್ರಕರಣಗಳು ಇತ್ಯರ್ಥವಾಗಬೇಕು ಹಾಗೂ ಈ ದಿಶೆಯಲ್ಲಿ ನಾಯ ಒದಗಿಸಬೇಕೆಂಬ ಆಶಯದಡಿಯಲ್ಲಿ ದಿಲ್ಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಷ್ಟ್ರದಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆದಿದ್ದು, ಅದರಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಜ್ಯಾದ್ಯಂತ ಪ್ರಕರಣಗಳನ್ನು ರಾಜಿ ಮಾಡಲಾಗಿದೆ.
ಲೋಕ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳು ವಿಲೇವಾರಿಯಾಗಿರುವುದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿರುವುದಲ್ಲದೇ ನಾಯಾಲಯಗಳ ಮೇಲಿನ ಪ್ರಕರಣಗಳ ಹೊರೆ ಗಣನೀಯವಾಗಿ ತಗ್ಗಿದೆ.
ಲೋಕ ಅದಾಲತ್ ಯಶಸ್ವಿಗೆ ಶ್ರಮಿಸಿದ ನ್ಯಾಯಾಧೀಶರಿಗೆ, ವಕೀಲರಿಗೆ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ನಾಯಾಲಯದ ಸಿಬ್ಬಂದಿಯವರಿಗೆ ಹಾಗೂ ಪರಿಹಾರ ಪಡೆದ ಎಲ್ಲ ಜನರರಿಗೆ ರಾಜ್ಯದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಪ್ರಧಾನ ಪೋಷಕರು ಹಾಗೂ ಕರ್ನಾಟಕ ಆಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ಹೈಕೋರ್ಟ್‌ನ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಅರವಿಂದ್ ಕುಮಾರ್‌ರವರು ಅಭಿನಂದನೆ ಸಲ್ಲಿಸಿದ್ದಾರೆ.
ಅಂಕಿ-ಅಂಶ
* ರಾಜಿ ಸಂಧಾನದ ಮೂಲಕ ಇತ್ಯರ್ಥ: 28,958
* ವ್ಯಾಜ್ಯ ಪೂರ್ವ ಪ್ರಕರಣಗಳು: 9,915
* ಹೈಕೋರ್ಟ್‌ನಲ್ಲಿ ಬಾಕಿ ಇದ್ದ ಪ್ರಕರಣಗಳು: 919
* ಒಟ್ಟು ಪ್ರಕರಣಗಳು: 39,792
* ರಾಜಿಯ ಮೊತ್ತ: 212