ಮೈಸೂರು: 'ಪಲ್ಸ್ ಪೋಲಿಯೋ'ಗೆ ಸಚಿವ ಜಿ.ಟಿ ದೇವೇಗೌಡ ಚಾಲನೆ
ಮೈಸೂರು,ಮಾ.10: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ರವಿವಾರ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆಯು 2014ರ ಮಾರ್ಚ್ 27 ರಂದು ಭಾರತವು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೊಷಿಸಿದೆ. ಆದರೂ ಸಹ ನಮ್ಮ ಮುಂದಿನ ಪೀಳಿಗೆ ಆರೋಗ್ಯವಂತ ಪ್ರಜೆಗಳಾಗಲಿ ಎಂಬ ಉದ್ದೇಶದಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಂದುವರೆಲಾಗಿದೆ ಎಂದು ಹೇಳಿದರು.
ಮೈಸೂರು ಜಿಲೆಯಲ್ಲಿ ಒಟ್ಟು 2,49,954 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ 1604 ಪೋಲಿಯೋ ಬೂತ್‍ಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ಬಸ್ ನಿಲ್ದಾಣಗಳು ರೈಲ್ವೆ ನಿಲ್ದಾಣಗಳು ಪ್ರವಾಸಿ ತಾಣಗಳು ಹಾಗೂ ಮಾಲ್‍ಗಲು ಸೇರಿದಂತೆ 24 ಸಂಚಾರಿ ಘಟಕಗಳು ಸಹ ಕೆಲಸ ನಿರ್ವಹಿಸುತ್ತಿವೆ ಎಂದು ಹೇಳಿದರು. ಜಿಲ್ಲೆಯಲ್ಲಿ 6512 ಲಸಿಕಾ ಕಾರ್ಯಕರ್ತರು, 326 ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಇದೇ ವೇಳೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮಹಾನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ಮುಡಾ ಅಧ್ಯಕ್ಷರಾದ ವಿಜಯ್ ಕುಮಾರ್, ಪಾಲಿದೆ ಸದಸ್ಯೆ ಭಾಗ್ಯಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಿ.ಬಸವರಾಜು, ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಎಲ್.ರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕಿ ಕೆ.ಪದ್ಮ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.