ದಿಲ್ಲಿಯಲ್ಲಿ ಆಪ್-ಕಾಂಗ್ರೆಸ್ ಮೈತ್ರಿ ?

Update: 2019-03-10 18:46 GMT

ಹೊಸದಿಲ್ಲಿ, ಮಾ.10: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಿಲ್ಲಿಯಲ್ಲಿ ಕಾಂಗ್ರೆಸ್ ಇದುವರೆಗೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಂಡಿಲ್ಲ ಎಂದು ದಿಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಶೀಲಾ ದೀಕ್ಷಿತ್ ರವಿವಾರ ಹೇಳಿಕೆ ನೀಡಿರುವುದು, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ಮಧ್ಯೆ ಮೈತ್ರಿಯ ಸಾಧ್ಯತೆಯನ್ನು ಮತ್ತೆ ಮುಕ್ತವಾಗಿರಿಸಿದೆ ಎಂದು ವಿಶ್ಲೇಷಿಸಲಾಗಿದೆ.

ಕಳೆದ ವಾರ ಹೇಳಿಕೆ ನೀಡಿದ್ದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಯ ಸಾಧ್ಯತೆಯೇ ಇಲ್ಲ ಎಂದು ಖಡಾಖಂಡಿತವಾಗಿ ತಿಳಿಸಿದ್ದರು. ಆದರೆ ಶನಿವಾರ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶೀಲಾ ದೀಕ್ಷಿತ್, ‘ ದಿಲ್ಲಿಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಂಡಿಲ್ಲ ಎಂದು ರಾಹುಲ್ ಗಾಂಧಿಯವರಿಗೂ ತಿಳಿಸಿದ್ದೆ ಮತ್ತು ಈಗ ಸೋನಿಯಾ ಗಾಂಧಿಯವರಿಗೂ ತಿಳಿಸಿದ್ದೇನೆ ’ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News