×
Ad

ಮಾ.12: ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನೆ

Update: 2019-03-11 20:07 IST

ಉಡುಪಿ, ಮಾ.11: ಮೀನುಗಾರರ ನಾಪತ್ತೆ ಪ್ರಕರಣ ಹಾಗೂ ಜಿಲ್ಲೆಯಲ್ಲಿ ರುವ ಮರಳಿನ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಮಾ.12ರ ಬೆಳಗ್ಗೆ 11:30ಕ್ಕೆ ಅಜ್ಜರಕಾಡಿನಲ್ಲಿರುವ ಯೋಧರ ಯುದ್ಧ ಸ್ಮಾರಕದ ಎದುರು ಜಯ ಕರ್ನಾಟಕದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಸರಕಾರಗಳ ವೈಫಲ್ಯಗಳನ್ನು ಖಂಡಿಸಿ ಮುಂದಿನ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವಂತೆ ಸಾರ್ವಜನಿಕರನ್ನು ಕೋರಲಾಗುವುದು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಹಾಗೂ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಕರುಣಾಕರ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News