ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2019-03-11 16:54 GMT

ಹಿರಿಯಡ್ಕ, ಮಾ.11: ಟಿಪ್ಪರ್ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಪೆರ್ಡೂರು ಮೇಲ್ಪೇಟೆ ಹಾಸ್ಟೆಲ್ ಬಳಿ ಮಾ.10ರಂದು ನಡೆದಿದೆ.

ಮೃತರನ್ನು ಪೆರ್ಡೂರು ಕುಕ್ಕುಂಡಿ ನಿವಾಸಿ ಭಾಸ್ಕರ್ ಮಡಿವಾಳ ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಪೆರ್ಡೂರು ಕಡೆಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಕರ್ಜೆ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಬೈಕ್ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಭಾಸ್ಕರ್ ಮಡಿವಾಳ, ಅಪರಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News