ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 14,214 ವಿದ್ಯಾರ್ಥಿಗಳು

Update: 2019-03-11 17:02 GMT

ಉಡುಪಿ, ಮಾ.11: ಈ ವರ್ಷದ ಎಸೆಸೆಲ್ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 14,214 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಮಾ.21ರಿಂದ ಎ.4ರವರೆಗೆ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಈ ಸಂಬಂಧ ಪೂರ್ವ ಸಿದ್ಧತಾ ಸಭೆ ಸೋಮವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.

ಸಭೆಗೆ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ, ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಿದ್ದು, ಬೈಂದೂರು ವಲಯದ 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2092 ವಿದ್ಯಾರ್ಥಿಗಳು, ಕುಂದಾಪುರ ವಲಯದ 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2528 ವಿದ್ಯಾರ್ಥಿ ಗಳು, ಬ್ರಹ್ಮಾವರ ವಲಯದ 11 ಪರೀಕ್ಷಾ ಕೇಂದ್ರಗಳಲ್ಲಿ 2927 ವಿದ್ಯಾರ್ಥಿ ಗಳು, ಉಡುಪಿ ವಲಯದ 15 ಪರೀಕ್ಷಾ ಕೇಂದ್ರಗಳಲ್ಲಿ 3749 ವಿದ್ಯಾರ್ಥಿ ಗಳು ಹಾಗೂ ಕಾರ್ಕಳ ವಲಯದ 9 ಪರೀಕ್ಷಾ ಕೇಂದ್ರಗಳಲ್ಲಿ 2918 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳ 438 ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳ ಎಸೆಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಇಡಲು ಭದ್ರತಾ ಕೊಠಡಿ ವ್ಯವಸ್ಥೆಯನ್ನು ಉಡುಪಿ ಕ್ರಿಶ್ಚಿಯನ್ ಪ್ರೌಢಶಾಲೆಯಲ್ಲಿ ಮಾಡಲಾಗಿದೆ ಎಂದರು.

ಪ್ರತೀ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆಪತ್ರಿಕೆ ಸ್ವೀಕರಿಸಲು ಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್ ನೇಮಕ ಮಾಡಲಾಗಿದ್ದು, ತಾಲೂಕು ತಹಶೀಲ್ದಾರರು, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಒಟ್ಟು 3 ತಂಡ, ಜಿಲ್ಲಾ ಜಾಗೃತ ದಳ ಅಧಿಕಾರಿಗಳ 2 ತಂಡ, ಉಪನಿರ್ದೇಶಕ (ಅಭಿವೃದ್ಧಿ), ಉಪಯೋಜನಾ ಸಮನ್ವಯಾಧಿಕಾರಿಗಳನ್ನು ಒಳಗೊಂಡ ತಂಡ ನೇಮಕ ಮಾಡಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತು ಪಡಿಸಿ ಇತರ ಇಲಾಖೆಗಳಿಂದ ಪ್ರತಿ ಕೇಂದ್ರಕ್ಕೆ ವೀಕ್ಷಕರನ್ನು ಸಹ ನೇಮಕ ಮಾಡಲಾಗಿದೆ ಎಂದು ಶೇಷಶಯನ ವಿವರಿಸಿದರು.

ಕುಂದಾಪುರ ವಲಯದಿಂದ 2 ಮಾರ್ಗಾಧಿಕಾರಿ, ಬೈಂದೂರು, ಬ್ರಹ್ಮಾವರ, ಕಾರ್ಕಳ, ಉಡುಪಿ ವಲಯದಿಂದ 3 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪ್ರತೀ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳ ಸಂಖ್ಯೆಗನು ಗುಣವಾಗಿ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗುವುದು. ಕೊಠಡಿ ಮೇಲ್ವಿಚಾರಕರ ಪಟ್ಟಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುಮೋದನೆ ನೀಡುವರು. ಪರೀಕ್ಷಾ ಕೆಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿಗೆ ಬರಲಿದ್ದು, ಇದು ಕಟ್ಟುನಿಟ್ಟಾಗಿ ಜಾರಿಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕುಂದಾಪುರ ವಲಯದಿಂದ 2 ಮಾರ್ಗಾಧಿಕಾರಿ, ಬೈಂದೂರು, ಬ್ರಹ್ಮಾವರ, ಕಾರ್ಕಳ, ಉಡುಪಿ ವಲಯದಿಂದ 3 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪ್ರತೀ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳ ಸಂಖ್ಯೆಗನು ಗುಣವಾಗಿ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗುವುದು. ಕೊಠಡಿ ಮೇಲ್ವಿಚಾರಕರ ಪಟ್ಟಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುಮೋದನೆ ನೀಡುವರು. ಪರೀಕ್ಷಾ ಕೆಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿಗೆ ಬರಲಿದ್ದು, ಇದು ಕಟ್ಟುನಿಟ್ಟಾಗಿ ಜಾರಿಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News