×
Ad

ಉಡುಪಿ: ಪ.ಜಾತಿ, ಪ.ಪಂಗಡದವರಿಗೆ ತರಬೇತಿಗೆ ಅರ್ಜಿ ಆಹ್ವಾನ

Update: 2019-03-11 22:47 IST

 ಉಡುಪಿ, ಮಾ.11: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ ಇತ್ಯಾದಿಗಳ ಕುರಿತು ವಸತಿ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಚಲನಚಿತ್ರದ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ ಯಾವುದೇ ಪದವೀಧರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಕ/ ಯುವತಿಯರು ಅರ್ಜಿ ಗಳನ್ನು ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್ -WWW.KCAINFO.IN ಹಾಗೂ- http://karnatakainformation.gov.in-ನಿಂದ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಮಾ.30ರ ಒಳಗೆ ಅರ್ಜಿಯಲ್ಲಿ ತಿಳಿಸಿರುವ ದಾಖಲಾತಿಗಳೊಂದಿಗೆ ರಿಜಿಸ್ಟಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಅಮೃತ ಮಹೋತ್ಸವ ವನ, ಬೆಂಗಳೂರು ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 080-22028096ನ್ನು ಸಂಪರ್ಕಿಸುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News