ಗಾಂಜಾ ಸೇವನೆ: ಆರೋಪಿ ಸೆರೆ
Update: 2019-03-11 22:51 IST
ಮಂಗಳೂರು, ಮಾ.11: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪದಲ್ಲಿ ಯುವಕನನ್ನು ನಗರದ ವೇರ್‌ಹೌಸ್ ಜಂಕ್ಷನ್ ಬಳಿಯ ಸುವರ್ಣ ಕರ್ನಾಟಕ ಜನಸ್ನೇಹಿ ವೇದಿಕೆಯ ಕಟ್ಟಡ ಎದುರು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಅಭಿಷೇಕ್ (23) ಬಂಧಿತ ಆರೋಪಿ.
ಮಂಗಳೂರು ನಗರ ಇಕನಾಮಿಕ್ಸ್ ಆ್ಯಂಡ್ ನಾರ್ಕೊಟಿಕ್ಸ್ ಪೊಲೀಸ್ ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಶ್ಯಾಮ್ ಸುಂದರ್ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಈ ಕುರಿತು ಇಕನಾಮಿಕ್ಸ್ ಆ್ಯಂಡ್ ನಾರ್ಕೊಟಿಕ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.