ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.50 ರಷ್ಟು ಸೀಟು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲು

Update: 2019-03-11 17:40 GMT

ಬೆಂಗಳೂರು, ಮಾ.11: ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯು ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮುಕ್ತ ವಿಭಾಗದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡಲು ನಿರ್ಧರಿಸಿದೆ.

ವೈದ್ಯಕೀಯ ಸ್ನಾತಕೋತ್ತರ ಅಭ್ಯಾಸ ಮಾಡಲು ಬಯಸುತ್ತಿರುವ ಆಕಾಂಕ್ಷಿಗಳಿಗೆ ಸಮಾಧಾನದ ಸುದ್ದಿಯಾಗಿದೆ. ವೈದ್ಯಕೀಯ ಸ್ನಾತಕೋತ್ತರ ಸೀಟುಗಳಿಗಿರುವ ಬೇಡಿಕೆಗಳನ್ನು ಪರಿಗಣಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ನಿಯಮಕ್ಕೆ ತಿದ್ದುಪಡಿ ತಂದಿದೆ. ಅದರಲ್ಲಿ ಶೇ.50ರಷ್ಟು ಮೀಸಲಾತಿಯನ್ನು ಮುಕ್ತ ವಿಭಾಗದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ನಾಳೆ ಇಲಾಖೆ ಈ ಸಂಬಂಧ ಪ್ರವೇಶ ಅಧಿಸೂಚನೆಯನ್ನು ಹೊರಡಿಸುವ ಸಾಧ್ಯತೆಯಿದೆ.

ಮುಕ್ತ ವಿಭಾಗದಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದರೆ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ಕಡಿಮೆಯಾಗುತ್ತದೆ. ಇದಕ್ಕಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇಕಡಾ 50ರಷ್ಟು ಮೀಸಲಾತಿ ತರಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶೇ.50ರಷ್ಟು ಮೀಸಲಾತಿಯಲ್ಲಿ ಶೇ.42ರಷ್ಟು ಸೀಟುಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಮುಕ್ತ ವಿಭಾಗದಲ್ಲಿ ನೀಡಲಾಗುತ್ತದೆ. ಶೇ.33ರಷ್ಟು ಸರಕಾರಿ ಕಾಲೇಜುಗಳು, ಶೇ.42ರಷ್ಟು ಖಾಸಗಿ ಕಾಲೇಜುಗಳಿಗೆ ಮತ್ತು ಶೇಕಡಾ 15ರಷ್ಟು ಅನಿವಾಸಿ ಭಾರತೀಯರಿಗೆ ಮತ್ತು ಶೇಕಡಾ 10ರಷ್ಟು ಸಾಂಸ್ಥಿಕ ಮತ್ತು ಇನ್ ಸರ್ವಿಸ್ ಕೋಟಾಕ್ಕೆ ನೀಡಲಾಗುತ್ತದೆ. ಶೇ.42 ಸೀಟುಗಳಲ್ಲಿ ಖಾಸಗಿ ಕಾಲೇಜುಗಳು ನೀಟ್ ಪರೀಕ್ಷೆ ಮೂಲಕ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News