×
Ad

ವಿ.ಟಿ.ಯು ಗುಡ್ಡಗಾಡು ಓಟ: ಆಳ್ವಾಸ್‍ಗೆ ಅವಳಿ ಪ್ರಶಸ್ತಿ

Update: 2019-03-11 23:13 IST

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಿಂಗಲ್ ಜೋನ್ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಅವಳಿ ಪ್ರಶಸ್ತಿಯನ್ನು ಪಡೆದಿದೆ.

ಭಟ್ಕಳದ ಅಂಜಮಾನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಗುಡ್ಡಗಾಡು ಓಟದಲ್ಲಿ ಪುರುಷರ ವಿಭಾಗದಲ್ಲಿ ಪ್ರಥಮ ಮತ್ತು ಮಹಿಳಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗೆದ್ದಿದೆ. ವೈಯಕ್ತಿಕ ಪುರುಷರ ವಿಭಾಗದಲ್ಲಿ ಅಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸುಜನ್ ಶೇಖರ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಆಳ್ವಾಸ್ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News