×
Ad

ನನ್ನ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್ ಸ್ಪಷ್ಟನೆ

Update: 2019-03-12 18:42 IST

ಬೆಂಗಳೂರು, ಮಾ.12: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿರುವ ಸುಮಲತಾ, ಮಂಡ್ಯ ಜನರ ಋಣ ತೀರಿಸಲು ನಾನು ಬದ್ಧ, ಮಂಡ್ಯ ಜನರನ್ನು ದಿಕ್ಕು ತಪ್ಪಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರ ಮಾಡುತ್ತಿದ್ದಾರೆ ಎಂದಿದ್ದಾರೆ.

'ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಸ್ಪರ್ಧಿಸುತ್ತಿಲ್ಲ, ಕಾಂಗ್ರೆಸ್ ನಾಯಕರು ಸಹಕಾರ ನೀಡದ ಹಿನ್ನೆಲೆ ಅವರು ಕಣದಿಂದ ಹಿಂದೆ ಸರಿಯಲಿದ್ದಾರೆ' ಎಂಬ ಮಾತು ಕೇಳಿಬಂದಿತ್ತು. ಇದಕ್ಕೆ ಯಾವುದೇ ಊಹಾಪೋಹದ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ. ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನೊಂದಿಗಿರಲಿ. ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ, ಬೆಂಬಲಗಳೇ ನಮಗೆ ಶ್ರೀರಕ್ಷೆ ಎಂದು ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News