ಉಡುಪಿ: ವಿಶೇಷ ಚೇತನ ಮತದಾರರ ಸಹಾಯವಾಣಿ ಆರಂಭ

Update: 2019-03-12 15:20 GMT

ಮಣಿಪಾಲ, ಮಾ.12: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಕಲ ಚೇತನರು, ಹಿರಿಯ ನಾಗರಿಕರು ಹಾಗೂ ಅಶಕ್ತರು ಸಾಮಾನ್ಯರಂತೆ ಬಂದು ಮತದಾನ ಮಾಡಲು ಅನುಕೂಲವಾಗುವಂತೆ, ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ವಿಕಲಚೇತನರ ಮಾಹಿತಿ ಕೇಂದ್ರದ ವತಿಯಿಂದ ಕಳೆದ ಬಾರಿಯಂತೆ ಈ ಸಲವೂ ವಿಶೇಷ ಚೇತನ ಮತದಾರರ ಸಹಾಯವಾಣಿಯನ್ನು ಆರಂಭಿಸಲಾಯಿತು.

ಚುನಾವಣೆಗೆ ಸಂಬಂಧಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ, ಮತದಾನ ಕೇಂದ್ರದಲ್ಲಿ ಇರುವ ಸೌಲಭ್ಯ, ಬಾಕಿ ಇರುವ ಮತದಾರರ ಗುರುತಿನ ಚೀಟಿ, ಮತದಾನ ದಿನದಂದು ಮತ ಕೇಂದ್ರಕ್ಕೆ ಬರುವ ವ್ಯವಸ್ಥೆ ಸೇರಿದಂತೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 0820-2574811ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕಣ ಅಧಿಕಾರಿ ನಿರಂಜನ್ ಭಟ್ ತಿಳಿಸಿದ್ದಾರೆ.

ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಸಿಂಧು ಬಿ ರೂಪೇಶ್ ವಿಶೇಷ ಚೇತನ ಮತದಾರರ ಸಹಾಯ ವಾಣಿ ಕೇಂದ್ರವನ್ನು ಉದ್ಘಾಟಿಸಿದರು. ನಗರಸಭಾ ಪೌರಾಯುಕ್ತ ಆನಂದ ಕಲ್ಲೋಳಿಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News