ಸೈನಿಕ ಕಲ್ಯಾಣ, ಪುನರ್ವಸತಿ ಇಲಾಖೆಯ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Update: 2019-03-12 15:28 GMT

ಉಡುಪಿ, ಮಾ.12: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಮಾಜಿ ಸೈನಿಕರ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಜಾಲತಾಣ http://kpsc.kar.nic.in  (ಆನ್‌ಲೈನ್) ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಮಾಜಿ ಸೈನಿಕರು ಈ ಮೇಲೆ ನಮೂದಿಸಿರುವ ಜಾಲತಾಣ ವಿಳಾಸದ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಎ.5 ಕೊನೆಯ ದಿನ. ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ ಬೆಂಗಳೂರು (ದೂರವಾಣಿ : 080-30574957 /30574901 /30575153) ಇವರಿಂದ ಪಡೆಯಬಹುದು ಎಂದು ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News