ಮಂಗಳೂರು ವಿಮಾನ ನಿಲ್ದಾಣದಲ್ಲಿ 26 ಲಕ್ಷ ರೂ. ಮೌಲ್ಯದ ಚಿನ್ನ ವಶ
Update: 2019-03-12 21:48 IST
ಮಂಗಳೂರು, ಮಾ.12: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ದುಬೈಯಿಂದ ಬಂದಿಳಿದ ಇಬ್ಬರು ಪ್ರಯಾಣಿಕರಿಂದ ಸುಮಾರು 26.92 ಲಕ್ಷ ರೂ. ಮೌಲ್ಯದ 821.58 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕರಿಬ್ಬರು ವಿದೇಶಿ ಮೂಲದ ಶುದ್ಧ 24 ಕ್ಯಾರೆಟ್ ಚಿನ್ನವನ್ನು ಪೌಡರ್ ಹಾಗೂ ಪೇಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದರು. ವಿಮಾನ ನಿಲ್ದಾಣದಲ್ಲಿ ಇಳಿದು ಹೊರ ಬರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಈ ಸಂದರ್ಭ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದುದು ಪತ್ತೆಯಾಗಿದೆ.
ಕೆಲ ದಿನಗಳ ಹಿಂದೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಪ್ರಯಾಣಿಕರಿಂದ ಇದೇ ರೀತಿ ಸುಮಾರು 50 ಲಕ್ಷ ರೂ. ಮೌಲ್ಯದ ಚಿನ್ನ ಸಾಗಿಸುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.