ಮತದಾನ ಮಾಡಲು 11 ಪರ್ಯಾಯ ಗುರುತಿನ ದಾಖಲೆಗಳು
ಬೆಂಗಳೂರು, ಮಾ.12: ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಮತದಾರರ ಬಳಿ ಮತದಾನದ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಪರ್ಯಾಯ ಗುರುತಿನ ಚೀಟಿ ತೋರಿಸುವ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಯಾವುದೆ ವ್ಯಕ್ತಿ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಮತದಾನದ ಗುರುತಿನ ಚೀಟಿ ಇಲ್ಲದಿದ್ದರೆ ಚುನಾವಣಾ ಆಯೋಗ ಪಟ್ಟಿ ಮಾಡಿರುವ ಭಾವಚಿತ್ರವಿರುವ ಗುರುತಿನ ಚೀಟಿ ತೋರಿಸುವ ಮೂಲಕ ಮತದಾನ ಮಾಡಬಹುದಾಗಿದೆ.
ಪರ್ಯಾಯ ಗುರುತಿನ ಚೀಟಿಗಳು: ಪಾಸ್ ಪೋರ್ಟ್, ಡ್ರೈವಿಂಗ್ ಲೈಸನ್ಸ್, ಕೇಂದ್ರ, ರಾಜ್ಯ, ಪಿಎಸ್‌ಯು, ಪಬ್ಲಿಕ್ ಲಿಮಿಟೆಡ್ ಕಂಪೆನಿಗಳ ಭಾವಚಿತ್ರ ಹೊಂದಿರುವ ಸೇವಾ ಗುರುತಿನ ಚೀಟಿ, ಪೋಸ್ಟ್ ಆಫೀಸ್ ಮತ್ತು ಬ್ಯಾಂಕುಗಳಲ್ಲಿ ನೀಡಿರುವ ಪಾಸ್‌ಬುಕ್‌ಗಳು, ಪ್ಯಾನ್‌ಕಾರ್ಡ್.
ಆರ್‌ಜಿಐ ಮತ್ತು ಎನ್‌ಪಿಆರ್ ಮೂಲಕ ನೀಡಿರುವ ಸ್ಮಾರ್ಟ್ ಕಾರ್ಡ್, ಉದ್ಯೋಗ ಖಾತ್ರಿ ಗುರುತಿನ ಚೀಟಿ, ಕಾರ್ಮಿಕ ಇಲಾಖೆಯಿಂದ ನೀಡಲಾಗಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಭಾವಚಿತ್ರ ಹೊಂದಿರುವ ಪೆನ್ಶನ್ ಕಾರ್ಡ್‌ಗಳು, ಲೋಕಸಭಾ ಸದಸ್ಯರುಗಳು, ರಾಜ್ಯಸಭಾ ಸದಸ್ಯರುಗಳು, ಶಾಸಕರು, ವಿಧಾನಸಭಾ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು ಹಾಗೂ ಆಧಾರ್ ಕಾರ್ಡ್ ತೋರಿಸಿ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ.