ಉಗ್ರರ ವಿರುದ್ಧ ಕ್ರಮಕ್ಕಾಗಿ ಪಾಕ್ ಮೇಲೆ ನಿರಂತರ ಒತ್ತಡ: ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ

Update: 2019-03-12 17:34 GMT

ವಾಶಿಂಗ್ಟನ್, ಮಾ. 12: ಪಾಕಿಸ್ತಾನದ ಮೇಲೆ ಒತ್ತಡ ಹೇರುವುದನ್ನು ಅಮೆರಿಕ ಮುಂದುವರಿಸಿದ್ದು, ಭಯೋತ್ಪಾದನೆಯ ವಿರುದ್ಧ ‘ಅರ್ಥಪೂರ್ಣ ಕ್ರಮ’ಗಳನ್ನು ತೆಗೆದುಕೊಳ್ಳುವಂತೆ ಪಾಕಿಸ್ತಾನಕ್ಕೆ ಸೋಮವಾರ ಕರೆ ನೀಡಿದೆ.

‘‘ಪಾಕಿಸ್ತಾನದ ವಿದೇಶ ಸಚಿವ ಶಾ ಮಹ್ಮೂದ್ ಕುರೇಶಿ ಜೊತೆಗೆ ಮಾತನಾಡಿ, ಪಾಕಿಸ್ತಾನದ ನೆಲದಿಂದ ಕಾರ್ಯಾಚರಿಸುತ್ತಿರುವ ಜೈಶೆ ಮುಹಮ್ಮದ್ ಮತ್ತು ಇತರ ಭಯೋತ್ಪಾದಕ ಗುಂಪುಗಳ ವಿರುದ್ಧ ಅರ್ಥಪೂರ್ಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇನೆ’’ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಪುಲ್ವಾಮದಲ್ಲಿ ಜೈಶೆ ಮುಹಮ್ಮದ್ ಫೆಬ್ರವರಿ 14ರಂದು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.

‘‘ಎಲ್ಲ ಭಯೋತ್ಪಾದಕರ ವಿರುದ್ಧ ಪಾಕಿಸ್ತಾನವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಹಾಗೂ ಭಾರತದೊಂದಿಗಿನ ಉದ್ವಿಗ್ನತೆಯನ್ನು ತಣಿಸಲು ನಿರಂತರ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬುದಾಗಿ ಪಾಕಿಸ್ತಾನದ ವಿದೇಶ ಸಚಿವರು ನನಗೆ ಭರವಸೆ ನೀಡಿದರು’’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News