ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ

Update: 2019-03-13 15:31 GMT

ಬೆಂಗಳೂರು, ಮಾ.13: ಲಿಂಗಾಯುತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ, ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬುಧವಾರ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾ.10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News