ಶಾಸಕ ಆನಂದ್‌ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್

Update: 2019-03-13 17:41 GMT

ಬೆಂಗಳೂರು, ಮಾ.13: ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್ ಸಿಂಗ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ.

2018ರ ವಿಧಾನಸಭೆ ಚುನಾವಣೆ ವೇಳೆ ಆನಂದ್ ಸಿಂಗ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಹೊಸಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಹೊಸಪೇಟೆ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.  

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿ, ಮೂರು ಬಾರಿ ವಿಚಾರಣೆಗೆ ಹಾಜರಾಗುವಂತೆ ಆನಂದ್‌ಸಿಂಗೆ ನೋಟಿಸ್ ನೀಡಲಾಗಿತ್ತು. ಆದರೆ, ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News