ಆಡಳಿತಾಧಿಕಾರಿಗಳ ನೇಮಕಕ್ಕೆ ಅಧಿಸೂಚನೆ

Update: 2019-03-13 16:14 GMT

ಬೆಂಗಳೂರು, ಮಾ. 13: ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಚುನಾಯಿತ ಕೌನ್ಸಿಲ್ ಅವಧಿ 2019ರ ಮಾರ್ಚ್, ಎಪ್ರಿಲ್ ಹಾಗೂ ಮೇ ವೇಳೆ ಮುಕ್ತಾಯಗೊಳ್ಳಲಿದ್ದು, ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವ ವರೆಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.

ನಗರಸಭೆಗೆ ಜಿಲ್ಲಾಧಿಕಾರಿ ಅಥವಾ ಸಮಾನ ದರ್ಜೆ, ಪುರಸಭೆಗೆ ತಹಶಿಲ್ದಾರ್ ಅಥವಾ ಸಮಾಜ ದರ್ಜೆ ಹಾಗೂ ಪಟ್ಟಣ ಪಂಚಾಯತ್ ಗೆ ತಹಶಿಲ್ದಾರ್ ದರ್ಜೆ ಅಧಿಕಾರಿಗಳನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆ ಅಧೀಕ್ಷಕ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News