ಅಸಂಟಿತ ಖಾಸಗಿ ವಾಣಿಜ್ಯ ವಾಹನ ಚಾಲಕರಿಗೆ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Update: 2019-03-13 16:40 GMT

ಉಡುಪಿ, ಮಾ.13: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ದ್ರತಾ ಮಂಡಳಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ತಾಲೂಕು ಘಟಕ ಇವರ ಸಹಯೋಗದಲ್ಲಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಪಘಾತ ಜೀವ ರಕ್ಷಕ ತರಬೇತಿ ಕಾರ್ಯಗಾರ (ಪ್ರಥಮ ಚಿಕಿತ್ಸೆ) ವನ್ನು ಉಡುಪಿಯ ಆಟೋರಿಕ್ಷಾ ಚಾಲಕರಿಗೆ ಕುಂದಾಪುರದ ತಾಪಂ ಸಭಾಂಗಣ ದಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ತಾಪಂ ಅಧ್ಯಕ್ಷೆ ಶ್ಯಾಮಲ ಎಸ್ ಕುಂದರ್ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಉಡುಪಿ ರೆಡ್‌ಕ್ರಾಸ್‌ನ ಗೌರವ ಖಜಾಂಜಿ ಟಿ. ಚಂದ್ರಶೇಖರ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ರೆಡ್‌ಕ್ರಾಸ್‌ನ ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್.ಜಯಕರ್ ಶೆಟ್ಟಿ ವಹಿಸಿದ್ದರು.

ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಡಿ.ಎಸ್. ಸತ್ಯನಾರಾಯಣ ಸ್ವಾಗತಿಸಿ ದರು. ಡಾ.ಕೀರ್ತಿ ಪಾಲನ್, ಡಾ.ಸೋನಿ ಮತ್ತು ಡಾ.ಸುರೇಶ್ ಶೆಣೈ ಕಾರ್ಯಗಾರದಲ್ಲಿ ಭಾಗವಹಿಸಿ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ 137 ವಾಹನ ಚಾಲಕರು ಭಾಗವಹಿಸಿ ತರಬೇತಿಯನ್ನು ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News