ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Update: 2019-03-13 22:45 IST
ಮಡಿಕೇರಿ, ಮಾ.13: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಸ್ಟೋನ್‍ಹಿಲ್ ಬಳಿ ನಡೆದಿದೆ.
ಪುಟಾಣಿ ನಗರ ಬಡಾವಣೆಯ ನಿವಾಸಿ ಪೈಂಟಿಂಗ್ ಕೆಲಸ ಮಾಡುವ ಶರತ್ (26) ಎಂಬಾತ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ನಡೆಸಿದ ನಾಲ್ವರ ಪತ್ತೆಗೆ ಬಲೆ ಬೀಸಿದ್ದಾರೆ.