ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷರಾಗಿ ಉಸ್ಮಾನ್ ಹಾಜಿ

Update: 2019-03-13 18:04 GMT

ಮೂಡುಬಿದಿರೆ: ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷರಾಗಿ ಏರ್ ಇಂಡಿಯಾ ಮಾಲಕ ತೋಡಾರಿನ ಡಿ.ಎ.ಉಸ್ಮಾನ್ ಹಾಜಿ ಅವರು ಆಯ್ಕೆಯಾಗಿದ್ದಾರೆ.

ಮಾಜಿ ಶಾಸಕ ಕೆ.ಅಭಯಚಂದ್ರ ಹಾಗೂ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಅವರ ಶಿಫಾರಸ್ಸಿನಂತೆ ಜಿಲ್ಲಾಧ್ಯಕ್ಷ ಹಾಜಿ ಎನ್.ಎಸ್.ಕರೀಂ ಅವರು ಉಸ್ಮಾನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಯು.ಟಿ.ಖಾದರ್ ಅವರು ಉಸ್ಮಾನ್ ಅವರಿಗೆ ನೇಮಕಾತಿ ಪತ್ರ ನೀಡಿದರು. 
ಮಾಜಿ ಸಚಿವ ಕೆ.ಅಭಯಚಂದ್ರ, ಮಿಥುನ್ ರೈ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News