ಕಸಾಪ ಅಧ್ಯಕ್ಷರ ಅವಧಿ ಪ್ರಶ್ನಿಸಿದ ಅರ್ಜಿ: ಮನು ಬಳಿಗಾರ್‌ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

Update: 2019-03-14 16:35 GMT

ಬೆಂಗಳೂರು, ಮಾ.14: ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರ ಅಧಿಕಾರದ ಅವಧಿಯನ್ನು 3 ವರ್ಷದಿಂದ 5 ವರ್ಷಗಳಿಗೆ ವಿಸ್ತರಿಸುವ ನಿರ್ಣಯ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೊ.ವೆಂ.ರಾಮಕೃಷ್ಣೇಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವಿ.ಸಿ.ಚನ್ನೇಗೌಡ ಸೇರಿ ಒಟ್ಟು ಆರು ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News