ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 37 ಲಕ್ಷ ಮೌಲ್ಯದ ಚಿನ್ನ ವಶ

Update: 2019-03-14 16:58 GMT
ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು,ಮಾ.14: ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 37 ಲಕ್ಷ ಮೌಲ್ಯದ 1 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನ ಯುವಕನೊಬ್ಬ 572 ನಂಬರಿನ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾಗ ಒಳ ಉಡುಪಿನಲ್ಲಿ 553 ಗ್ರಾಂ ಚಿನ್ನ ಸಾಗಿಸುತ್ತಿದ್ದ. ಅನುಮಾನ ಬಂದು ಪರಿಶೀಲಿಸಿದಾಗ ಅವನ ಒಳ ಉಡುಪಿನಲ್ಲಿ ಚಿನ್ನದ ಪೇಸ್ಟ್ ಪತ್ತೆಯಾಗಿದೆ. ಮತ್ತೊಂದು ಪ್ರಕರಣದಲ್ಲಿ ಸೌದಿ ಅರೇಬಿಯಾಗೆ ಪ್ರಯಾಣ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ 50 ವರ್ಷದ ವ್ಯಕ್ತಿಯ ಬ್ಯಾಗ್‌ನಲ್ಲಿ 566 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಒಟ್ಟು ಮೊತ್ತ 18.75 ಲಕ್ಷವಾಗಿದೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 37.5 ಲಕ್ಷ ಮೌಲ್ಯದ 1.12 ಕೆಜಿ ಚಿನ್ನವನ್ನು ಕೆಐಎಎಲ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News