ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ: 4 ಎಸಿ ಭಸ್ಮ

Update: 2019-03-14 16:59 GMT

ಕಲಬುರಗಿ ಮಾ 14: ನಗರದ ಶಾಲಾ ಮಕ್ಕಳ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡು ನಾಲ್ಕು ಎಸಿ (ಹವಾ ನಿಯಂತ್ರಣ ಸಾಧನ)ಗಳು ಸುಟ್ಟು ಭಸ್ಮವಾಗಿವೆ.

ದಟ್ಟವಾಗಿ ಹೊಗೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 15 ಮಕ್ಕಳನ್ನು ತಕ್ಷಣ ಬೇರೆ ಕಡೆ ಸ್ಥಳಾಂತರಿಸಲಾಗಿದೆ. ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅನಾಹುತದಿಂದ ಸುಮಾರು 4.5 ಲಕ್ಷ ರೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News