ಮಾ.16: ಜಲಮಂಡಳಿ ಫೋನ್‌ಇನ್ ಕಾರ್ಯಕ್ರಮ

Update: 2019-03-14 17:50 GMT

ಬೆಂಗಳೂರು, ಮಾ.14: ಬೆಂಗಳೂರು ಜಲಮಂಡಳಿ ವತಿಯಿಂದ ಮಾ.16 ರಂದು ಬೆಳಗ್ಗೆ 9 ರಿಂದ 10:30 ರವರೆಗೆ ಮಂಡಳಿಯ ಅಧ್ಯಕ್ಷರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ತಮ್ಮ ವಲಯ ಅಥವಾ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ, ಒಳಚರಂಡಿ ಕೊಳವೆ ಅಥವಾ ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಗಳ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.

ಫೋನ್‌ ಇನ್‌ನಲ್ಲಿ ಪಾಲ್ಗೊಳ್ಳುವವರು 080-22945119 ಸಂಖ್ಯೆಗೆ ಕರೆ ಮಾಡಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News