ಎರಡು ದಿನಗಳಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

Update: 2019-03-15 06:45 GMT

ಮೈಸೂರು, ಮಾ. 15: ಎರಡು ದಿನಗಳಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಪಕ್ಷಗಳು ಸೀಟು ಹೊಂದಾಣಿಕೆ ಮಾಡಿಕೊಂಡು ಈಗಾಗಲೇ ಲೋಕ ಸಭಾ ಕ್ಷೇತ್ರಗಳ ಹಂಚಿಕೆ ಆಗಿದೆ ರಾಜ್ಯದ ಇಪ್ಪತ್ತು ಕ್ಷೇತ್ರಗಳಲ್ಲೂ ಹೆಚ್ಚಿನ ಆಕಾಂಕ್ಷಿಗಳಿದ್ದಾರೆ. ನಾಳೆ ರಾಜ್ಯದ ಎಲ್ಲಾ ಹಿರಿಯ ಕಾಂಗ್ರೆಸ್ ನಾಯಕರು ಸಭೆ ಸೇರಿ ಒಂದೇ ಹಂತದಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪಟ್ಟಿ ಬಿಡುಗಡೆಗೊಳಿಸಲಿದ್ದೇವೆ. ನಾನು ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ ನಾಯಕರು ರಾಜ್ಯದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಲಿದ್ದೇವೆ. ಕಾಂಗ್ರೆಸ್ ಪಕ್ಷ ಇಪ್ಪತ್ತು ಕ್ಷೇತ್ರಗಳಲ್ಲೂ ಸಹ ಗೆಲುವು ಸಾಧಿಸಲಿದೆ. ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ ಲೋಕಸಭೆಗಳಲ್ಲಿ ಅವರು ಯಾರನ್ನು ಅಭ್ಯರ್ಥಿಗಳನ್ನಾಗಿಸುತ್ತಾರೆ ಎಂಬುದು ಆ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.

ತುಮಕೂರು ಲೋಕಸಭೆ ಕ್ಷೇತ್ರವನ್ನು ಪುನರ್ ಪರಿಶೀಲಿಸಲು ಒತ್ತಾಯವಿದೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವೇಣುಗೋಪಾಲ್ ರೊಂದಿಗೆ ನಾನು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕಳೆದ ಐದು ವರ್ಷಗಳಲ್ಲಿ ನಾವು ಮಾಡಿರುವ ಸಾಧನೆಗಳನ್ನು ಬಿಜೆಪಿ ಸಂಸದರು ತಮ್ಮದೆಂದು ಬಿಂಬಿಸಿಕೊಳ್ಳಲು ಮುಂದಾಗಿದ್ದಾರೆ. ಸೇನೆ ಹಾಗೂ ರಾಷ್ಟ್ರದ ಭದ್ರತಾ ದೃಷ್ಟಿಯಿಂದ ಏರ್ ಸ್ಟ್ರೆಕ್ ಪ್ರಕರಣವನ್ನು ರಾಜಕೀಯಗೊಳಿಸಬಾರದು ಇದರಿಂದ ಯಾರೂ ಲಾಭ ಗಳಿಸಲು ಸಾಧ್ಯವಿಲ್ಲ. ಸುಮಲತಾ ಸ್ಪರ್ಧೆ ಬಗ್ಗೆ ನಾನು ಮಾತನಾಡೋಲ್ಲ. ನಮ್ಮ ಪಾರ್ಟಿಯಿಂದ ಅವರು ನಿಲ್ಲೋಲ್ಲ ಹಾಗಾಗಿ ಅವರ ಬಗ್ಗೆ ನಾನು ಮಾತನಾಡೋಲ್ಲ. ಸುಮಲತಾ ಈಗಲೂ ನಮ್ಮ ಪಾರ್ಟಿಯಲ್ಲಿ ಇದ್ದಾರೆ. ಆದ್ರೆ ನಮ್ಮ ಪಾರ್ಟಿಯಿಂದ ಅವರು ನಿಲ್ಲುತ್ತಿಲ್ಲ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌‌ಗೆ ಬಿಟ್ಟು ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News