ಮಾ.18ರಂದು ಬಿಜೆಪಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ: ​ಸಚಿವ ಪ್ರಿಯಾಂಕ್ ಖರ್ಗೆ

Update: 2019-03-15 14:00 GMT

ಕಲಬುರಗಿ, ಮಾ.15: ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಮಾ.18ರಂದು ಕಲಬುರ್ಗಿಗೆ ಆಗಮಿಸಲಿದ್ದು, ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಶುಕ್ರವಾರ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದಲ್ಲಿ ಬಿಜೆಪಿಯ ಸ್ಥಳೀಯ ಮುಖಂಡರು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಮಾಡಿರುವ ಅನ್ಯಾಯವನ್ನು ರಾಹುಲ್‌ಗಾಂಧಿ ಎಳೆ ಎಳೆಯಾಗಿ ಬಿಚ್ಚಿಡಲಿದ್ದಾರೆ. ಬಿಜೆಪಿಯ ದುರಾಡಳಿತದಿಂದ ಜನತೆ ಬೇಸತ್ತಿದ್ದು, ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಜನತೆಯ ವಿಶ್ವಾಸ, ಪ್ರೀತಿಯನ್ನು ಕಾಂಗ್ರೆಸ್ ಸದ್ಬಳಕೆ ಮಾಡಿಕೊಳ್ಳಲು ಇದು ಸಕಾಲವೆಂದು ಅವರು ಹೇಳಿದರು.

ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಒಂದು ಲಕ್ಷಕ್ಕೂ ಅಧಿಕ ಜನತೆ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News