ಎಸೆಸೆಲ್ಸಿ ಪರೀಕ್ಷೆ: ಮಾ.21 ರಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Update: 2019-03-15 15:02 GMT

ಬೆಂಗಳೂರು, ಮಾ.15: ಎಸೆಸೆಲ್ಸಿ ಪರೀಕ್ಷೆಗಳು ಮಾ.21 ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ರಾಜ್ಯಾದ್ಯಂತ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

ಮಾ.21 ರಿಂದ ಆರಂಭಗೊಂಡು ಎ.4 ರವರೆಗೂ ಪರೀಕ್ಷೆಗಳು ನಡೆಯಲಿವೆ. ಈ ಸಂದರ್ಭದಲ್ಲಿ ಪ್ರತಿದಿನ ಬೆಳಗ್ಗೆ ಎಂಟರಿಂದ ಸಂಜೆ ಆರು ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಿರುತ್ತದೆ. ಈ ಅವಧಿಯಲ್ಲಿ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿರಬೇಕು ಎಂದು ಶಿಕ್ಷಣ ಇಲಾಖೆಯು ಆದೇಶ ಹೊರಡಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತ ಐವರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ಸುತ್ತಾಡುವುದು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದು, ಪರೀಕ್ಷಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಬೆದರಿಕೆಯನ್ನು ಒಡ್ಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ನಿಷೇಧಿತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಮೊಬೈಲ್ ಬಳಕೆಯನ್ನು ಹಾಗೂ ಪರೀಕ್ಷಾ ಗೌಪ್ಯ ಸಾಮಗ್ರಿಗಳನ್ನು ಯಾವುದೇ ಕಾರಣಕ್ಕೂ ಕೇಂದ್ರದಿಂದ ಹೊರತೆಗೆದುಕೊಂಡು ಹೋಗುವುದು ನಿಷೇಧ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News